Posts

Showing posts from March, 2024

ಚುಟುಕು ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕದ ವತಿಯಿಂದ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ 17-03-2024ರಂದು ನಡೆದ ಸಾಹಿತ್ಯ ಸಂಭ್ರಮ 2024ರ ಚುಟುಕು ಗೋಷ್ಠಿ - ಹನಿ ಮಿನಿ ಕಥಾ ಗೋಷ್ಠಿಯ ಅಧ್ಯಕ್ಷತೆ ವಹಿಸಿದ ಸಂದರ್ಭದಲ್ಲಿ....

Image
ಚುಟುಕು ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ವತಿಯಿಂದ 'ಸಾಹಿತ್ಯ ಸಂಭ್ರಮ - 2024' ಚುಟುಕು ಗೋಷ್ಠಿ - ಹನಿ ಮಿನಿ ಕಥಾ ಗೋಷ್ಠಿ ವಿಟ್ಲ: ಚುಟುಕು ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ವತಿಯಿಂದ ಸಾಹಿತ್ಯ ಸಂಭ್ರಮ 2024ರ ಚುಟುಕು ಗೋಷ್ಠಿ - ಹನಿ ಮಿನಿ ಕಥಾ ಗೋಷ್ಠಿ ಕಾರ್ಯಕ್ರಮವು ಅಡ್ಯನಡ್ಕ ಜನತಾ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಮತ್ತು ಸಾಹಿತಿ ಶಿವಕುಮಾರ್ ಸಾಯ ಅವರ ಅಧ್ಯಕ್ಷತೆಯಲ್ಲಿ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಮಾರ್ಚ್ 17ರಂದು ನಡೆಯಿತು. ಕನ್ನಡ ಪಯಸ್ವಿನಿ ಪ್ರಶಸ್ತಿ ವಿಜೇತ ಶಿಕ್ಷಕಿ, ಕವಯಿತ್ರಿ ಸೀತಾಲಕ್ಷ್ಮಿ ವರ್ಮ, ವಿಟ್ಲ ಅರಮನೆ ಅವರು ಸಮಾರಂಭವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಚುಟುಕು ಸಾಹಿತ್ಯ ಪರಿಷತ್ತು ದ. ಕ. ಜಿಲ್ಲಾಧ್ಯಕ್ಷರಾದ ಹರೀಶ ಸುಲಾಯ ಒಡ್ಡಂಬೆಟ್ಟು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಚುಟುಕು ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಆನಂದ ರೈ ಅಡ್ಕಸ್ಥಳ ಉಪಸ್ಥಿತರಿದ್ದರು. ಚುಟುಕು ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷರಾದ ರಾಜಾರಾಮ ವರ್ಮ ವಿಟ್ಲ ಅರಮನೆ ಪ್ರಸ್ತಾವನೆಗೈದರು. ವಿಟ್ಲದಲ್ಲಿ ಚುಟುಕು ಸಾಹಿತ್ಯ ಸಮ್ಮೇಳನ ಆಯೋಜನೆಗಾಗಿ ಚ...